ಅಪ್ರಾಪ್ತೆಯನ್ನು ಅತ್ಯಾಚಾರಗೈದಿದ್ದವನಿಗೆ: 7ವರ್ಷ ಕಾರಾಗೃಹ ಶಿಕ್ಷೆ

Rape victim: 7 years imprisonment

17-08-2018

ಬೆಂಗಳೂರು: ಪರಿಚಯವಾಗಿದ್ದ ಅಪ್ರಾಪ್ತ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ, ಅಪಹರಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ ನಗರದ ಸಿಸಿಎಚ್ ನ್ಯಾಯಾಲಯ 7 ವರ್ಷ ಕಾರಾಗೃಹ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಬನಶಂಕರಿಯ ಮಂಜುನಾಥ ಕಾಲೋನಿಯ ಕಾಮಣ್ಣ ಅಲಿಯಾಸ್ ರವಿಕುಮಾರ್ (22)ಗೆ ನಗರದ 54ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಮೂರ್ತಿ ಲತಾ ಕುಮಾರಿ ಅವರು, ಪೋಕ್ಸೊ ಕಾಯ್ದೆ ಸೇರಿದಂತೆ 5 ಕಲಂಗಳಲ್ಲಿ 7 ವರ್ಷಗಳ ಕಾರಾಗೃಹ ಶಿಕ್ಷೆ,  80 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಈಗಾಗಲೇ ವಿವಾಹವಾಗಿದ್ದರೂ ಅದನ್ನು ಮುಚ್ಚಿಟ್ಟಿದ್ದ ಕಾಮಣ್ಣ ಕಳೆದ 2014ರ ಡಿಸೆಂಬರ್ 2 ರಂದು ಸಂಜೆ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಕರೆದೊಯ್ದು ಅತ್ಯಾಚಾರವೆಸಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ಶೇಖರ್ ಅವರು ತನಿಖೆ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿ ಆರೋಪಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿಯು ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕೆ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದರಿಂದ ಮತ್ತೆ ಕಾರ್ಯಾಚರಣೆ ನಡೆಸಿ, ಕಾಮಣ್ಣನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸಿಸಿಎಚ್ 54ನೇ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಲತಾ ಕುಮಾರಿ ಅವರು, ವಾದ-ಪ್ರತಿವಾದ ಆಲಿಸಿ ಆರೋಪಿಗೆ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

city civil court rape ಜಾಮೀನು ವಿವಾಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ