ಮಹಿಳೆಯರಿಬ್ಬರ ಕತ್ತಿಗೆ ಕೈ ಹಾಕಿದ ಸರಗಳ್ಳರು

2 chain snatch incidents was reported at bengaluru!

18-08-2018

ಬೆಂಗಳೂರು: ನಗರದ ಹೆಣ್ಣೂರು ಹಾಗೂ ಸದಾಶಿವನಗರ ಸೇರಿ ಪ್ರತ್ಯೇಕ 2 ಕಡೆಗಳಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಸರಗಳನ್ನು ಹಿಂದಿನಿಂದ ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಹೆಚ್.ಬಿ.ಆರ್ ಲೇಔಟ್ ಬಳಿ ನಿನ್ನೆ ಬೆಳಿಗ್ಗೆ 8.20ರ ವೇಳೆ ನಡೆದುಕೊಂಡು ಹೋಗುತ್ತಿದ್ದ ಜ್ಯೋತಿ ಅವರ ಕತ್ತಿನಲ್ಲಿದ್ದ 35 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ.

ಜ್ಯೋತಿ ಅವರು ವಾಯುವಿಹಾರಕ್ಕೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಈ ಕೃತ್ಯ ನಡೆದಿದ್ದು, ಹೆಣ್ಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಾದ ಒಂದೂವರೆ ಗಂಟೆಯೊಳಗೆ ನ್ಯೂ ಬಿಎಲ್ ರಸ್ತೆಯ ದೇವಸಂದ್ರ ಬಸ್ ನಿಲ್ದಾಣದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ 30 ಗ್ರಾಂ ಚಿನ್ನದ ಸರವನ್ನು ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ.

ಬೆಳಿಗ್ಗೆ 9.45ರ ವೇಳೆ ಮಹಿಳೆಯು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಮಹಿಳೆಯ ಪತಿ ತ್ಯಾಗರಾಜ್ ಅವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿರುವ ಸದಾಶಿವನಗರ ಪೊಲೀಸರು ದುಷ್ಕರ್ಮಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

chain snatch women ಬಸ್ ನಿಲ್ದಾಣ ಪರಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ