ಪ್ರವಾಹ: ಕಪಿಲಾ ನದಿ ಪಾತ್ರದ ಪ್ರದೇಶಗಳಿಗೆ ಜಿಟಿಡಿ ಭೇಟಿ

G.T.Devegowda visited nanjangud and other flood affected places

18-08-2018

ಮೈಸೂರು: ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಹಿನ್ನೆಲೆ, ನಂಜನಗೂಡಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿ ಪ್ರವಾಹ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ. ನಂಜನಗೂಡಿನ ಹೆಜ್ಜಿಗೆ ಸೇತುವೆ, ಮುಡಿಕಟ್ಟೆ, ಸ್ನಾನದ ಘಟ್ಟ, ಶ್ರೀಕಂಠೇಶ್ವರ ದೇವಾಲಯದ ಸುತ್ತಲಿನ ಮುಳುಗಡೆ ಪ್ರದೇಶ, ಜಲಾವೃತವಾಗಿರುವ ಹಳ್ಳದಕೇರಿ ಸೇರಿದಂತೆ ಪಟ್ಟಣದ ಇತರೆ ಬಡಾವಣೆಗಳ ಪರಿಶೀಲನೆ ನಡೆಸಿದ್ದಾರೆ ಮತ್ತು ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಸಚಿವ ಜಿಟಿಡಿಗೆ ಸಚಿವ ಆರ್.ವಿ.ದೇಶಪಾಂಡೆ, ನಂಜನಗೂಡು ಶಾಸಕ ಹರ್ಷವರ್ಧನ್ ಸಾಥ್ ನೀಡಿದ್ದಾರೆ. ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಿಂಗ್, ತಹಸೀಲ್ದಾರ್ ದಯಾನಂದ್ ಸೇರಿದಂತೆ ಅಧಿಕಾರಿಗಳು ಭಾಗಿ ಸಚಿವರೊಂದಿಗೆ ಪ್ರವಾಹದ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೆ ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ, ಮಾಜಿ ಶಾಸಕರಾದ ವಾಸು, ಕಳಲೆ ಕೇಶವಮೂರ್ತಿ ಸೇರಿದಂತೆ ಪ್ರಮುಖರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ