ರಕ್ಷಣಾಕಾರ್ಯಕ್ಕೆ ಜಲಸಂಪನ್ಮೂಲ-ವೈದ್ಯಕೀಯ ಇಲಾಖೆ ನೆರವು: ಡಿಕೆಶಿ

Water Resources department - Medical Department Assistance to relife work in kodagu: DKS

18-08-2018

ಬೆಂಗಳೂರು: ಕೊಡಗಿನಲ್ಲಿ ಭಾರಿ ಮಳೆ ಹಿನ್ನೆಲೆ, ಜಲಸಂಪನ್ಮೂಲ ಹಾಗು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ‘ಈ ಬಾರಿ ದಾಖಲೆ ಪ್ರಮಾಣದಲ್ಲಿ ರಾಜ್ಯದ ಜಲಾಶಯಗಳಿಗೆ ನೀರು ಹರಿದು ಬಂದಿದೆ. ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಕಾಲುವೆಗಳನ್ನು ದುರಸ್ಥಿ ಮಾಡಿ ಕೆರೆಗಳನ್ನು ತುಂಬಿಸಲು ಆದೇಶಿಸಿದ್ದೇವೆ.

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿವೃಷ್ಟಿ ಅನಾಹುತಗಳಾಗಿವೆ. ಅಲ್ಲೆಲ್ಲಾ ನೀರಾವರಿ ಇಲಾಖೆಯ ಎಂಜಿನಿಯರ್ ಗಳು ಮತ್ತು ಗುತ್ತಿಗೆದಾರರಿಗೆ ನೆರವು ನೀಡುವಂತೆ ಆದೇಶಿಸಿದ್ದೇವೆ. ನೀರಾವರಿ ಇಲಾಖೆಯ ಗುತ್ತಿಗೆದಾರರ ಯಂತ್ರೋಪಕರಣಗಳನ್ನು ಬಳಕೆ ಮಾಡಿಕೊಂಡು ರಸ್ತೆ ಕ್ಲಿಯರ್ ಮಾಡಿಸಲು ಸೂಚಿಸಲಾಗಿದೆ.

ನೆರೆ ಪರಿಹಾರಕ್ಕೆ ಬೆಂಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಗಾರ್ಮೆಂಟ್ ಕಾರ್ಖಾನೆಗಳಲ್ಲಿ ಲಭ್ಯ ಇರುವ ಸಕೆಂಡ್ಸ್ ಬಟ್ಟೆಗಳನ್ನು ಕಳುಹಿಸಲು ಹಾಗೂ ರಾಮನಗರ ಜಿಲ್ಲಾ ಪಂಚಾಯ್ತಿ ಮತ್ತು ಜಿಲ್ಲಾಧಿಕಾರಿ ಕಚೇರಿಗೂ ನೆರೆ ಪರಿಹಾರ ಸಾಮಗ್ರಿಗಳನ್ನು ‌ಕಳುಹಿಸಿಕೊಡಲು ಉದ್ಯಮಿಗಳು ಮತ್ತು ಶಾಸಕರಿಗೆ ಮನವಿ ಮಾಡಿದ್ದೇವೆ. ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರ ತಂಡವನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸಲು, ಔಷಧ ನೆರವು ನೀಡಲು ಸಹ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

ಕೆ.ಆರ್.ಎಸ್, ಕಬಿನಿ ಹಾಗೂ ಹೇಮಾವತಿ ತುಂಗಭದ್ರಾ ಭಾಗದ ಅಣೆಕಟ್ಟುಗಳಲ್ಲಿ ಸಣ್ಣ ಪುಟ್ಟ ಬಿರುಕುಗಳು ಉಂಟಾಗಿವೆ, ಭಾರಿ ನೀರು ಒಳಹರಿವು ಉಂಟಾಗಿರುವ ಕಾರಣ ಒತ್ತಡ ಹೆಚ್ಚಿದೆ, ಹಾಗಾಗಿ ಹೊರ ಹರಿವು ಹೆಚ್ಚಳ ಮಾಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು, ಅಣೆಕಟ್ಟು ಬಳಿ ಅಧಿಕಾರಿಗಳ ಗಸ್ತು ಹೆಚ್ಚಿಸಲು ಉದ್ದೇಶಿಸಿದ್ದೇವೆ ಎಂದರು.

ಇನ್ನು ಮಹದಾಯಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಡಿಕೆಶಿ ಮಹದಾಯಿ ವಿವಾದ ಕುರಿತಂತೆ ಮೇಲ್ಮನವಿ ಸಲ್ಲಿಸುವುದು ನಿಶ್ಚಿತ. ಈ ಸಂಬಂಧ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಾಗುತ್ತಿದೆ, ನಮ್ಮ ನೀರಿನ ಹಕ್ಕು ಉಳಿಸಿಕೊಳ್ಳುತ್ತೇವೆ ಎಂದರು.

 


ಸಂಬಂಧಿತ ಟ್ಯಾಗ್ಗಳು

D.K.Shivakumar flood ಮೇಲ್ಮನವಿ ಮಹದಾಯಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ