ತೋಟದ ಮನೆಯಲ್ಲಿ ರೈತರೊಬ್ಬರ ಶಂಕಾಸ್ಪದ ಸಾವು..!

suspicious death of a farmer

20-08-2018

ರಾಮನಗರ: ಚೆನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಣೀಪುರದಲ್ಲಿ  ರೈತರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಿನ್ನೆ ನಡೆದಿದೆ. ಮೃತ ರೈತನನ್ನು ಬ್ರಹ್ಮಣೀಪುರದ ಪುಟ್ಟಸ್ವಾಮಿ (40)ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ತನ್ನ ತೋಟದ ಮನೆಯಲ್ಲಿ ರಾತ್ರಿ ಮಲಗಿದ್ದ ಪುಟ್ಟಸ್ವಾಮಿ ಅವರು ಬೆಳಿಗ್ಗೆ ಮೃತದೇಹವಾಗಿ ಪತ್ತೆಯಾಗಿದ್ದಾರೆ.

ತೋಟಕ್ಕೆ ಹೋದವರು ಮೃತದೇಹ ನೋಡಿದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳು ಪುಟ್ಟಸ್ವಾಮಿ ಅವರನ್ನು ಮಲಗಿದ್ದಲ್ಲೇ ಉಸಿರುಗಟ್ಟಿಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Farmer murder ಹೊರವಲಯ ಮೃತದೇಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ