‘ಈಗಾಗಲೇ 22 ಲಕ್ಷ ಮಂದಿ ರೈತರು ಸಾಲ ಪಡೆದಿದ್ದಾರೆ’20-08-2018

ಬೆಂಗಳೂರು: ರಾಜ್ಯದ ಕೆಲ ಜಿಲ್ಲಾ ಸಹಕಾರಿ ಬ್ಯಾಂಕ್ ಗಳು ಆರ್ಥಿಕವಾಗಿ ಸದೃಢವಾಗಿಲ್ಲ ಹೀಗಾಗಿ ಈ ವರ್ಷಾಂತ್ಯದ ಒಳಗೆ ಸುಮಾರು 15 ಲಕ್ಷ ಸಾಲ ಕೊಡಬೇಕೆನ್ನುವ ಗುರಿ ಹೊಂದಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು ಹೇಳಿದರು.

ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ.ಭವನದಲ್ಲಿ  ಇದು ಕಾರ್ಯಕರ್ತರ ಅಹವಾಲುಗಳನ್ನು ಸ್ವೀಕರಿಸಿ ಸಕಾಲದಲ್ಲಿ ಪರಿಹಾರ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಹಣಕಾಸು ಯೋಜನೆ ರೂಪಿಸುತ್ತಿದ್ದೇವೆ. ಈಗಾಗಲೇ 22 ಲಕ್ಷ ಮಂದಿ ರೈತರು ಸಾಲ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ನಮ್ಮ ಪಕ್ಷದ ಕಚೇರಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಒಳ್ಳೆಯ ಕಾರ್ಯವನ್ನು ಮಾಡುತ್ತಿದ್ದೇವೆ. ಜನರ ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಮಾಡುತ್ತಿದ್ದೇವೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ಮಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಅಲ್ಲಿನ ಜನರಿಗೆ ಸಾರ್ವಜನಿಕರು ಸಹಾಯ ಮಾಡುತ್ತಿದ್ದಾರೆ. ನಾವೂ ಸಹ ನಾವು ಕೊಡಗು ಜನತೆಯ ಜೊತೆ ಇದ್ದೇವೆ ಎಂದು ಧೈರ್ಯ ತುಂಬಿದರು. ಜೆಡಿಎಸ್ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಪಕ್ಷದ ಕಾರ್ಯಕರ್ತರಿಂದ ಸ್ವೀಕರಿಸಿದ ಸಚಿವರು, ಕೆಲವೊಂದಕ್ಕೆ ಅಲ್ಲಿಯೇ  ಪರಿಹಾರ ನೀಡಿದರು. ಇಲಾಖೆಯ ಅಧಿಕಾರಿಗಳೊಂದಿಗೂ ದೂರವಾಣಿ ಮೂಲಕ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ