ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣು !

Kannada News

01-06-2017 317

ಮಂಡ್ಯ:- ಸಾಲಬಾಧೆಯಿಂದ ಮನನೊಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಬೋರಯ್ಯ(೬೦) ಆತ್ಮಹತ್ಯೆಗೆ ಶರಣಾದ ರೈತ. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ, ದೊಡ್ಡ ಅಂಕನಹಳ್ಳಿ ಗ್ರಾಮದ ರೈತ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಮಾರು ಎರಡು ಲಕ್ಷ‌ ಸಾಲ ಮಾಡಿಕೊಂಡಿದ್ದ ಅವರು ಗುತ್ತಿಗೆ ಜಮೀನಿನಲ್ಲಿ ಕಬ್ಬು ಬೆಳೆದಿದ್ದು, ಬರಗಾಲದಿಂದ ಕಬ್ಬು ಸಂಪೂರ್ಣ ಒಣಗಿ ಹೋಗಿತ್ತು ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ