ರಸ್ತೆ ದಾಟಲು ಹೋಗಿ ಕಾಲೇಜ್ ವಿದ್ಯಾರ್ಥಿ ಸಾವು

ksrtc bus accident college student died

21-08-2018 208

ಹುಬ್ಬಳ್ಳಿ: ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ನಗರದ ವರೂರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಎ.ಜಿ.ಎಮ್.ವರೂರ ಪಾಲಿಟೆಕ್ನಿಕ್ ಕಾಲೇಜ್ ವಿದ್ಯಾರ್ಥಿ ಪ್ರಜ್ವಲ್ ಎಂದು ಮೃತರನ್ನು ಗುರುತಿಸಲಾಗಿದೆ.

ಕಾಲೇಜಿಗೆ ಹೋಗಲು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಈ ಅಚಾತುರ್ಯ ಘಟನೆ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗುರುವಿನಹಳ್ಳಿಯಿಂದ ಹುಬ್ಬಳ್ಳಿ ಮಾರ್ಗವಾಗಿ ಚಲಿಸುತ್ತಿದ್ದ ಬಸ್ ನಿಂದಲೇ ಈ ಒಂದು ಅಪಘಾತ ಸಂಭವಿಸಿದೆ. ಪ್ರಜ್ವಲ್ ಎಂಬಾತನು ಎ.ಜಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

student KSRTC ಅಪಘಾತ ಅಚಾತುರ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ