ಕೊಡಗಿಗಾಗಿ ಹಂಪಿ ಕನ್ನಡ ವಿವಿ ಕುಲಪತಿಯಿಂದ ದೇಣಿಗೆ ಸಂಗ್ರಹ

Pro.Mallika ghanti collecting donations to kodagu flood

21-08-2018

ಬಳ್ಳಾರಿ: ಕೊಡಗು ಜಿಲ್ಲೆಯ ನೆರೆ ಸಂತ್ರಸ್ತ ನಿರಾಶ್ರಿತರಿಗೆ ನೆರವಾಗಲು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊಫೆಸರ್ ಮಲ್ಲಿಕಾ ಘಂಟಿ ತಮ್ಮ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಇಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿದರು. ಸುಮಾರು 100ಕ್ಕೂ ಹೆಚ್ಚು ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳಲ್ಲಿನ ಅಂಗಡಿ, ಮಳಿಗೆ, ಬೀದಿ ಬದಿ ವ್ಯಾಪಾರಿಗಳಿಂದ ಬಟ್ಟೆ, ದವಸ, ಧಾನ್ಯ, ನಗದನ್ನು ಸಂಗ್ರಹಿಸುತ್ತಿದ್ದರು. ಹಂಪಿ ವಿಶ್ವವಿದ್ಯಾನಿಲಯದ ಸಿಬ್ಬಂದಿ ತಮ್ಮ ಒಂದು ದಿನದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದಾರೆ ಎಂದು ಮಲ್ಲಿಕಾ ಘಂಟಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Hampi university ಮಲ್ಲಿಕಾ ಘಂಟಿ ವಿದ್ಯಾರ್ಥಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ