ರಾಜ್ಯ ವಿಧಾನಮಂಡಲ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ !

Kannada News

01-06-2017 276

ಮೈಸೂರು:- ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ಕೈಗೊಂಡರು . ಮೈಸೂರಿನಲ್ಲಿರುವ ತಮ್ಮ ನಿವಾಸದ ಬಳಿ ಜನತಾದರ್ಶನ ನಡೆಸಿದ್ದಾರೆ. ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸಲ್ಲಿಸಲು ಜನತೆ ಮುಗಿಬಿದ್ದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು. ಕೆಲ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಉಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅಲ್ಲದೆ  ರಾಜ್ಯ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಯಾರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಳ್ಳಬೇಕೆಂದು ನಾನೇ ತೀರ್ಮಾನ ಮಾಡುತ್ತೇನೆ. ಗೃಹ ಸಚಿವ ಪರಮೇಶ್ವರ್ ಅವರಿಗೆ ರಾಜೀನಾಮೆ ನೀಡುವಂತೆ ನಾನು ಸೂಚಿಸುವುದಿಲ್ಲ. ಹೈಕಮಾಂಡ್ ಆದೇಶದ ಹಿನ್ನೆಲೆಯಲ್ಲಿ ಅವರೇ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿಸಿದರು.

 


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ