ಪೆಟ್ರೋಲ್ ಸುರಿದು ಬಾರ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾರ್ ಮತ್ತು ರೆಸ್ಟೋರೆಂಟ್

23-08-2018

ಮಂಡ್ಯ: ಮದ್ದೂರಿನ ಶಿವಪುರದ ಗೌಡ ಬಾರ್ ಅಂಡ್ ರೆಸ್ಟೋರೆಂಟ್ ಗೆ ದುಷ್ಕರ್ಮಿಗಳು  ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿ 12ಗಂಟೆ ಸುಮಾರಿನಲ್ಲಿ ಬಾರ್ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ಹಚ್ಚಿದ ದೃಶ್ಯಗಳು ಎದುರಿನ ಪೆಟ್ರೋಲ್ ಬಂಕ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಕಿಯ ಕನ್ನಾಲಗೆ ವ್ಯಾಪಿಸುತ್ತಿದ್ದಂತೆ, ಸ್ಥಳಕ್ಕೆ ದೌಡಾಯಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ. ಇದರಿಂದ ಭಾರೀ ಅನಾಹುತವೊಂದು ತಪ್ಪಿದೆ. ಘಟನೆ ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

petrol cctv ಹರಸಾಹಸ ಅನಾಹುತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ