ವಿಜಯಪುರದ ತಾರಾಪುರ ಗ್ರಾಮ ಜಲಾವೃತ

Heavy rain at vijayapura tarapur

24-08-2018

ವಿಜಯಪುರ: ನೆರೆಯ ಮಹಾರಾಷ್ಟ್ರದಲ್ಲೂ ನಿನ್ನೆ ಭಾರೀ ಮಳೆಯಾಗಿದ್ದು, ಇಂದೂ ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಇದರಿಂದ ರಾಜ್ಯದ ಈ ಭಾಗದ ಗಡಿ ಜಿಲ್ಲೆಯಾದ ವಿಜಯಪುರದಲ್ಲಿ ಮಳೆಯಾಗುತ್ತಿದೆ. ಭೀಮಾನದಿ ಉಕ್ಕಿ ಹರಿಯುತ್ತಿದೆ. ಭೀಮಾನದಿಗೆ ಹರಿದು ಬಂದ ಅಪಾರ ಪ್ರಮಾಣದ ನೀರಿನಿಂದಾಗಿ ಜಿಲ್ಲೆಯ ಸಿಂದಗಿ ‌ತಾಲ್ಲೂಕಿನ ತಾರಾಪುರ ಗ್ರಾಮ ಜಲಾವೃತವಾಗಿದೆ. ತಾರಾಪುಕ್ಕೆ ಸಂಪರ್ಕ ರಸ್ತೆಯ ಮೇಲೆಲ್ಲಾ ನೀರು ಹರಿಯುತ್ತಿದ್ದು, ತಾರಾಪೂರ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಜಮೀನುಗಳಿಗೆ ನೀರು ನುಗ್ಗಿದೆ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.


ಸಂಬಂಧಿತ ಟ್ಯಾಗ್ಗಳು

Maharashtra Rain ಭೀಮಾನದಿ ಜಮೀನು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ