ಬೆಳೆಹಾನಿ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ದೇಶಪಾಂಡೆ ಸಭೆ

Minister R.V.deshpande meeting at kalburgi

24-08-2018

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಲಬುರ್ಗಿಗೆ ಭೇಟಿ ನೀಡಿದ್ದಾರೆ. ನಗರದ ಐವಾನ್ ಷಾಹಿ ಅತಿಥಿ ಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಜಿಲ್ಲೆಯ ಮಳೆಯ ಸ್ಥಿತಿ-ಗತಿ, ಬೆಳೆಯ ಪರಿಸ್ಥಿತಿ, ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದರು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಉಂಟಾಗಬಹುದಾದ ತೊಂದರೆ ನೀಗಿಸಲು ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ದೇಶಪಾಂಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಹಲವು ಶಾಸಕರು ಭಾಗಿಯಾಗಿದ್ದರು.


ಸಂಬಂಧಿತ ಟ್ಯಾಗ್ಗಳು

R.V.deshpande kalaburgi ಅತಿಥಿ ನಿರ್ಮಾಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ