ಮಡಿಕೇರಿಗೆ ಮತ್ತೊಮ್ಮೆ ಭಾರೀ ಮಳೆಯ ಎಚ್ಚರಿಕೆ!

again may heavy raina at kodagu: State Natural Disaster Management Department

24-08-2018

ಬೆಂಗಳೂರು: ಮಹಾಮಳೆ, ಪ್ರವಾಹ, ಗುಡ್ಡಕುಸಿತದಿಂದ ಕಂಗೆಟ್ಟಿರುವ ಕೊಡಗು ಮತ್ತು ಕರಾವಳಿ ಭಾಗದಲ್ಲಿ ಮತ್ತೆ ಮೂರು ದಿನಗಳ ಕಾಲ ಮಳೆ ಸುರಿಯಲಿದ್ದು ಆತಂಕ ಹೆಚ್ಚಾಗಿದೆ. ಬಂಗಾಳಕೊಲ್ಲಿಯ ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಶನಿವಾರದಿಂದ ಮೂರು ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಇಲಾಖೆ ಎಚ್ಚರಿಕೆ ನೀಡಿದೆ.

ಮಲೆನಾಡು ಕರಾವಳಿ ಭಾಗದಲ್ಲಿ ಸುಮಾರು 30 ರಿಂದ 35 ಮೀ.ಮೀ ವರೆಗೂ ಮಳೆಯಾಲಿದ್ದು ಎಚ್ಚರಿಕೆಯಿಂದ ಇರುವಂತೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ನಿರ್ದೇಶಕರಾದ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.

ಕಳೆದ 7 ದಿನಗಳ ಮಳೆ ಪ್ರಮಾಣ ಗಮನಿಸಿದರೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕ್ರಮೇಣ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಬಂಗಾಳಕೊಲ್ಲಿ ಒಡಿಶಾ ಭಾಗದಲ್ಲಿ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಒಂದೊಮ್ಮೆ ವಾಯುಭಾರ ಕುಸಿತವಾದರೆ ಮೋಡಗಳು ಮತ್ತೆ ಘಟ್ಟಪ್ರದೇಶದ ಕಡೆ ಚಲಿಸುವ ಸಾಧ್ಯತೆಯಿದೆ ಎಂದರು.

ಕಳೆದ ಮೂರು ದಿನಗಳಿಂದ ಮಲೆನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಅಲ್ಪ ಪ್ರಮಾಣದಲ್ಲಿ ಬಿಡುವು ನೀಡಿತ್ತು. ಇದರಿಂದ ಪ್ರವಾಹದಲ್ಲಿ ಸಿಲುಕಿರುವ ಸಂತ್ರಸ್ತರ ಹಾಗೂ ಭೂ ಕುಸಿತದಿಂದ ನಾಪತ್ತೆಯಾದ ಜನರ ಹುಡುಕಾಟ ಕಾರ್ಯಾಚರಣೆ ಕೂಡ ಕೈಗೊಳ್ಳಲಾಗಿತ್ತು. ಮೂರು ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಮುಂದುವರಿದರೆ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗುವ ಅತಂಕ ಇದ್ದು, ಮತ್ತಷ್ಟು ಭೂ ಕುಸಿತ ಸಂಭವಿಸುವ ಭಯವೂ ಜನರನ್ನು ಕಾಡುತ್ತಿದೆ.


ಸಂಬಂಧಿತ ಟ್ಯಾಗ್ಗಳು

kodagu flood ಹುಡುಕಾಟ ಸಂತ್ರಸ್ತ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ