ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಗರಂ24-08-2018

ಬೆಂಗಳೂರು: ಕೇಂದ್ರ ಸರ್ಕಾರ ಪ್ರವಾಹ ಪೀಡಿತ ಕೇರಳಕ್ಕೆ ಹೆಚ್ಚಿನ ಅನುದಾನ ನೀಡಿ, ಕೊಡಗು ವಿಚಾರದಲ್ಲಿ ಮಲತಾಯಿ ಧೋರಣೆ ತಳೆದಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರ ಜೊತೆಗರ ಮಾತನಾಡಿದ ಅವರು, ಕೇಂದ್ರ ಸರಕಾರ ರಾಜ್ಯದ ಪ್ರವಾಹ ಪರಿಸ್ಥಿತಿಗೆ ಹಣಕಾಸಿನ ನೆರವು ನೀಡಿಲ್ಲ. ನಮ್ಮ ಬಗ್ಗೆ ಅನುಕಂಪವನ್ನೂ ವ್ಯಕ್ತಪಡಿಸಿಲ್ಲ. ಕನಿಷ್ಠ ಪಕ್ಷ ಆತ್ಮಸ್ಥೈರ್ಯವನ್ನಾದರೂ ತುಂಬಿದ್ದರೆ ಅಲ್ಲಿನ ನಿರಾಶ್ರಿತರಿಗೂ ನೆಮ್ಮದಿ ಇರುತ್ತಿತ್ತು. ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಮಾತ್ರ ಹಣಕಾಸಿನ ನೆರವು ನೀಡಿ, ನಮ್ಮ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೊಡಗು ಮರುನಿರ್ಮಾಣಕ್ಕೆ ರಾಜ್ಯ ಸರಕಾರ ಬದ್ಧವಿದೆ. ಅಲ್ಲಿನ ಅನಾಹುತ, ಹಾನಿ ಬಗ್ಗೆ ಆದ್ಯತೆ ಮೇಲೆ ಸರಿ ಮಾಡಲಾಗುವುದು. ನಷ್ಟದ ಅಂದಾಜು ಕಾರ್ಯ ನಡೆಯುತ್ತಿದೆ. ಬಳಿಕ ಕೇಂದ್ರ ಸರ್ಕಾರಕ್ಕೆ ನೆರವು ಯಾಚಿಸಲಾಗುವುದು ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ