ರಕ್ತದಲ್ಲಿ ಸಿಎಂಗೆ ಪತ್ರ ಬರೆದಿದ್ದಾರೆ ರೈತರು

Farmers written a letter to cm with blood

27-08-2018

ತುಮಕೂರು: ಹಾಸನದ ಹೇಮಾವತಿ ಜಲಾಶಯದಿಂದ ಕೆರೆಗಳಿಗೆ ನೀರು ಹರಿಸಲು ಒತ್ತಾಯಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರೈತರು ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿದ್ದಾರೆ. ತುಮಕೂರಿನ ಮದಲೂರು ಕೆರೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಲು ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ. ಕೆರೆಗೆ ನೀರು ಹರಿಸಲು ಕಾಲುವೆ ನಿರ್ಮಾಣವಾಗಿದ್ದು ನೀರು ಹರಿಸಲು ಕೇಳಿಕೊಂಡಿದ್ದಾರೆ. ಸುಮಾರು 1500 ಹೆಕ್ಟೇರ್ ಗೂ ಅಧಿಕ ವ್ಯಾಪ್ತಿ ಹೊಂದಿರುವ ಮದಲೂರು ಕೆರೆಗೆ ನೀರು ಹರಿಸುವುದರಿಂದ ಸುತ್ತಮುತ್ತಲಿನ 8-10 ಕೆರೆಗಳು ತುಂಬಲಿವೆ, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ. ಮೊದಲ ಹಂತದಲ್ಲಿ ರಕ್ತದಲ್ಲಿ ಪತ್ರ ಬರೆದು ಹೋರಾಟಕ್ಕಿಳಿದ ರೈತರು, ಈ ಕುರಿತು ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳ್ಳುವ ಎಚ್ಚರಿಕೆಯನ್ನೂ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Hemavathi dam farmers ಹೆಕ್ಟೇರ್ ಮನವಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ