ರಾಜ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಶಾಸಕ ಕಾಗೇರಿ!

MLA vishweshwar hegde kageri comment on state government!

27-08-2018

ಶಿವಮೊಗ್ಗ: ‘ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಯು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಧಿಕಾರ ಕೈಹಿಡಿಯಲು ಯತ್ನಿಸಲಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ಮೇಲೆ ವಿಶ್ವಾಸವಿಟ್ಟು ಮತಹಾಕಿದ್ದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿಯೂ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ’ ಎಂದು ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ರಾಜ್ಯದ 108 ಕಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ 3 ಮಹಾನಗರ ಪಾಲಿಕೆಗಳಿವೆ. ಈ ಚುನಾವಣೆಯಲ್ಲೂ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಶಿವಮೊಗ್ಗದಲ್ಲಿ 25ಕ್ಕೂ ಹೆಚ್ಚಿನ ಸ್ಥಾನ ಬಿಜೆಪಿ ಕೈ ಹಿಡಿಯಲಿದೆ. ಬಿಜೆಪಿ ಸಂಘಟನೆ ಚೆನ್ನಾಗಿದೆ. ಜವಾಬ್ದಾರಿಗಳನ್ನು ಹಂಚಿಕೊಂಡಿದ್ದೇವೆ, ಸಾಮೂಹಿಕ ಪ್ರಚಾರ ಕಾರ್ಯ ನಡೆಯುತ್ತಿದೆ’ ಎಂದರು.

ಈ ಹಿಂದೆ ಯಡಿಯೂರಪ್ಪ ಸದಾನಂದಗೌಡ, ಜಗದೀಶ್ ಶೆಟ್ಟರ್ ಅವಧಿಯಲ್ಲಿ ಶಿವಮೊಗ್ಗ ಅಭಿವೃದ್ಧಿ ಕಂಡಿತ್ತು, ಬಳಿಕ ಅಭಿವೃದ್ಧಿ ನಡೆಯಲಿಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವೂ ಟೀಕೆ ಮಾಡಿದ ಕಾಗೇರಿ, ‘ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ, ಅಪವಿತ್ರ ಮೈತ್ರಿ‌ ಹೆಚ್ಚು ದಿನ ಉಳಿಯಲ್ಲ ಅನ್ನೋ ಸೂಚನೆಗಳು ಸಿಗುತ್ತಿವೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಬಿದ್ದುಹೋಗಲಿದೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ’ ಎಂದು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ರುದ್ರೇಗೌಡ, ಮುಖಂಡ ದತ್ತಾತ್ರಿ, ಅರುಣ್ ಕುಮಾರ್ ಉಪಸ್ಥಿತರಿದ್ದರು.


ಸಂಬಂಧಿತ ಟ್ಯಾಗ್ಗಳು

yeddyurappa vishweshwar hegde ka ಅಭಿವೃದ್ಧಿ ಸಾಮೂಹಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ