ಮರುಕಳಿಸಿತು ಆ ಘಟನೆ ಮತ್ತೊಮ್ಮೆ !

A person beaten by public: suspected as child kidnaper

27-08-2018

ಬೆಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ಯುವಕನನ್ನು ಮಕ್ಕಳ ಕಳ್ಳ ಎಂದು ಭಾವಿಸಿ, ಸ್ಥಳೀಯರು ಯುವಕನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ ಘಟನೆ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಹಲ್ಲೆಯಿಂದ ಗಾಯಗೊಂಡಿರುವ ಯುವಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಥಣಿಸಂದ್ರದ ಮುಖ್ಯರಸ್ತೆಯಲ್ಲಿ ಬೆಳಿಗ್ಗೆ ಯುವಕನೊರ್ವ ಅನುಮಾನಾಸ್ಪದವಾಗಿ ನಿಂತಿದ್ದನ್ನು ಗಮನಸಿದ ಸ್ಥಳೀಯರು ಮಕ್ಕಳ ಕಳ್ಳನೆಂದು ಭಾವಿಸಿ, ಗುಂಪು ಸೇರಿ ಆತನನ್ನು ಹಿಡಿದು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಸಾರ್ವಜನಿಕರಿಂದ ಯುವಕನನ್ನು ರಕ್ಷಿಸಿ. ಆಸ್ಪತ್ರೆಗೆ ದಾಖಲಿಸಿ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೆಣ್ಣೂರು ಪೊಲೀಸರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Fake message child ಖಾಸಗಿ ಮನಸೋ ಇಚ್ಛೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ