ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡ ವಿದ್ಯಾರ್ಥಿನಿ

A student committed suicide in hostel

27-08-2018

ಬೆಂಗಳೂರು: ಪದವಿ ವಿದ್ಯಾರ್ಥಿನಿಯೊಬ್ಬರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹೈಗ್ರೌಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾರಾಣಿ ಕಾಲೇಜಿನ  ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.

ನೇಣಿಗೆ ಶರಣಾದ ವಿದ್ಯಾರ್ಥಿನಿಯನ್ನು ಕೋಲಾರದ ಶ್ರೀನಿವಾಸ್‍ ಪುರ ಮೂಲದ ಶೃತಿ(21)ಎಂದು ಗುರುತಿಸಲಾಗಿದೆ. ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಬಿ.ಎ.ಕೊನೆ ಸೆಮಿಸ್ಟರ್‍ ವ್ಯಾಸಂಗ ಮಾಡುತ್ತಿದ್ದ ಶೃತಿ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿ ಉಳಿದುಕೊಂಡಿದ್ದಳು. ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ರಜೆಗಳು ಇದ್ದುದರಿಂದ ಜೊತೆಯಲ್ಲಿದ್ದ ಬಹುತೇಕ ವಿದ್ಯಾರ್ಥಿನಿಯರು ತಮ್ಮ ಊರುಗಳಿಗೆ ತೆರಳಿದ್ದರು. ವಿದ್ಯಾರ್ಥಿ ನಿಲಯದಲ್ಲಿ ಯಾರು ಇಲ್ಲದ ವೇಳೆ ಶೃತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬೆಳಿಗ್ಗೆ ತಿಂಡಿಗೆ ಬರದೇ ಇದ್ದುದನ್ನು ಗಮನಿಸಿದ ಉಳಿದ ವಿದ್ಯಾರ್ಥಿನಿಯರು ರೂಂಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಯುವತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

Hostel suicide ತಿಂಡಿ ನಿಖರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ