ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ಆತ್ಮಹತ್ಯೆ

Newly married woman committed suicide

28-08-2018

ಬೆಂಗಳೂರು: ಅಸ್ಸಾಂ ಮೂಲದ ನವ ವಿವಾಹಿತೆಯೊಬ್ಬರು ಕಬ್ಬಿಣದ ಮೆಟ್ಟಲಿನ ಕಂಬಕ್ಕೆ ನೇಣು ಬಿಗಿದು ಶಂಕಾಸ್ಪದವಾಗಿ ಮೃತಪಟ್ಟಿರುವ ದುರ್ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಿ.ಕೆ.ಪಾಳ್ಯದಲ್ಲಿ ನಡೆದಿದೆ.

ಸಿಕೆ ಪಾಳ್ಯದ ಸೋನಾಥೋನ್(18)ಎಂದು ಮೃತ ಮಹಿಳೆಯನ್ನು ಗುರುತಿಸಲಾಗಿದೆ. ಅಸ್ಸಾಂ ಮೂಲದ  ಸೋನಾಥೋನ್‍ಗೆ ಕಳೆದ ತಿಂಗಳಷ್ಟೇ ಮದುವೆಯಾಗಿತ್ತು ನಿನ್ನೆ ಆಕೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಮನೆಯ ಮುಂಭಾಗ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮನೆಯ ಹೊರಗಡೆ ಕಬ್ಬಿಣದ ಮೆಟ್ಟಿಲುಗಳಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ರೀತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಕೌಟುಂಬಿಕ ಕಲಹ ಹಿನ್ನೆಲೆಯಿಂದ ಮನನೊಂದು ರಾತ್ರಿ ಎಲ್ಲರೂ ಮಲಗಿದ ನಂತರ ಮನೆಯಿಂದ ಹೊರಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide Married ಹೊರಗಡೆ ಕಬ್ಬಿಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ