ಈ ವಿಚಾರವಾಗಿ ‘ನಾನೇನೂ ಹೇಳಲ್ಲ’ ಅಂದ್ರು ಈಶ್ವರ ಖಂಡ್ರೆ28-08-2018

ಬಾಗಲಕೋಟೆ: ‘ಕಾಂಗ್ರೆಸ್ ಪಕ್ಷದಿಂದ ಯಾರೂ ಬಿಜೆಪಿಗೆ ಹೋಗುತ್ತಿಲ್ಲ, ಬಿಜೆಪಿ ಶಾಸಕರೇ ನಮ್ಮ ಪಕ್ಷಕ್ಕೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಐದು ವರ್ಷ ಸ್ಥಿರ ಆಡಳಿತ ನೀಡುತ್ತೇವೆ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿರಬಹುದು ಎಲ್ಲವೂ ಸರಿಯಾಗುತ್ತವೆ ಎಂದಿದ್ದಾರೆ. ಸಮನ್ವಯ ಸಮಿತಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿ, ಈ ಬಗ್ಗೆ ಎರಡು ಪಕ್ಷದ ಮುಖಂಡರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ನೀಡಿದ ಯಾವುದೇ ಭರವಸೆ ಈಡೇರಿಲ್ಲ, ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ಟೀಕೆ ಮಾಡಿದ್ದಾರೆ. ಇದೇ ವೇಳೆ ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಆಹ್ವಾನದ ವಿಚಾರವಾಗಿ, ರಾಹುಲ್‌ ಗಾಂಧಿ ಆರ್.ಎಸ್.ಎಸ್ ನಿಲುವು ಖಂಡಿಸುತ್ತಾ ಬಂದಿದ್ದಾರೆ. ಆ ಬಗ್ಗೆ ನಾನೇನೂ ಹೇಳೋದಿಲ್ಲ ಎಂದರು.

ಸಾಲಮನ್ನಾ ರಾಜಕೀಯ ಪ್ರೇರಿತ ಎಂಬ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಹೇಳಿಕೆಗೆ, ಅದು ಅವರ ವ್ಯಯಕ್ತಿಕ ವಿಚಾರ ಎಂದಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನದಲ್ಲಿ ಜಯಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Eshwara Khandre Rahul gandhi ಸಾಲಮನ್ನಾ ಆರ್.ಎಸ್.ಎಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ