ಬೆಳ್ಳಿ ಪದಕ ಗೆದ್ದ ಉಷಾರಾಣಿಗೆ ಡಿಸಿಎಂ ಇಂದ ಸನ್ಮಾನ

dcm parameshwar honored silver medal won usha rani

28-08-2018

ಬೆಂಗಳೂರು: ಉಪ ಮುಖ್ಯಮಂತ್ರಿ, ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಇಂದು ಯುವಜನ ಮತ್ತು ಕ್ರಿಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ, ಇಂಡೋನೇಷಿಯಾದಲ್ಲಿ ನಡೆದ ಏಷಿಯನ್ ಕ್ರಿಡಾಕೂಟದಲ್ಲಿ  ಮಹಿಳಾ ಕಬಡ್ಡಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಉಷಾರಾಣಿ ಅವರಿಗೆ 15 ಲಕ್ಷ ಚೆಕ್ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿಗಳು ‘ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸುತ್ತಿರುವ ಉಷಾರಾಣಿ ಅವರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರ ಸಾಧನೆಗೆ ಪೊಲೀಸ್ ಇಲಾಖೆಯಲ್ಲಿ ‘ಬಿ’ ದರ್ಜೆ ಹುದ್ದೆ ನೀಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಚಿನ್ನ ಗೆಲ್ಲುವಂತಾಗಲಿ ಎಂದು ಆಶಿಸಿದರು.

ಇದೇ ಕ್ರೀಡಾಕೂಟದಲ್ಲಿ ಮಿಂಚಿದ ರೋಹನ್ ಬೋಪಣ್ಣ  ಹಾಗೂ ಫೌದ್ ಮಿರ್ಜಾ ಅವರನ್ನೂ ಶೀಘ್ರವೇ ಸನ್ಮಾನಿಸಲಾಗುವುದು ಎಂದರು. ಈ ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮುಖ್ಯಸ್ಥೆ ನೀಲಮಣಿ ರಾಜು ಹಾಗೂ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಮತ್ತಿತರರು ಹಾಜರಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ