ಮಹದಾಯಿ ವಿಚಾರದಲ್ಲಿ ರಾಜಕೀಯ ಬೇಡ: ಡಿಕೆಶಿ

Mahadayi issue: unfair to karnataka : DKS

28-08-2018

ಬೆಂಗಳೂರು: ಮಹದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಶೀಘ್ರದಲ್ಲೇ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಮುಂದಿನ ಕಾನೂನು ಹೋರಾಟ ನಡೆಸುವ ಸಂಬಂಧ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ವಿಚಾರದಲ್ಲಿ ಯಾವುದೇ ರಾಜಕೀಯ ಬೇಡ, ರಾಜ್ಯದ ಹಿತ ಕಾಪಾಡುವುದು ಮುಖ್ಯ. ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರ ಜೊತೆ ಈ ಸಂಬಂಧ ಚರ್ಚೆ ನಡೆಸಿದ ನಂತರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಮಹಾದಾಯಿ ನದಿ ನೀರು ಹಂಚಿಕೆ ವಿಚಾರದಲ್ಲಿ ಗೋವಾ ಸರ್ಕಾರ ಹಸಿರು ಪೀಠದ ಮುಂದೆ ಹೋಗಲು ನಿರ್ಧರಿಸಿದೆ. ಯೋಜನೆಯಿಂದ ಪರಿಸರಕ್ಕೆ ಹಾನಿಯಾಗಲಿದೆ ಎಂದು ರಾಜ್ಯದ ಪಾಲಿನ ನೀರು ಪಡೆಯಲು ವಿಘ್ನವುಂಟು ಮಾಡುವ ಪ್ರಯತ್ನದಲ್ಲಿ ಗೋವಾ ತೊಡಗಿದೆ ಎಂದು ಗಂಭೀರ ಆರೋಪ ಮಾಡಿದರು.

ಮಹದಾಯಿ ವಿಚಾರದಲ್ಲಿ ಗೋವಾ ರಾಜ್ಯದವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ  ರಾಜ್ಯದ ಹಿತ ಕಾಪಾಡುವುದು ನಮಗೆ ಮುಖ್ಯವಾಗಿದೆ. ಇದಕ್ಕಾಗಿ ನಾವು ಯಾವುದೇ ತ್ಯಾಗಕ್ಕೆ ಸಿದ್ಧ. ಸೂಕ್ತ ಹೋರಾಟಕ್ಕೆ ನಾವು ಸಜ್ಜಾಗಿದ್ದೇವೆ ಎಂದರು.

ರಾಜ್ಯದ ಜಲದ ವಿಚಾರದಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಎಲ್ಲಾ ಪಕ್ಷದ ಮುಖಂಡರಿಗೆ ಕೈ ಮುಗಿದು ಕೇಳಿಕೊಳ್ಳುತ್ತೇನೆ. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದ್ದು, ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಸರ್ಕಾರಕ್ಕೆ ಬೆಂಬಲ ನೀಡಬೇಕು. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ಹೇಳಿದರು.


ಸಂಬಂಧಿತ ಟ್ಯಾಗ್ಗಳು

Mahadayi D.K.Shivakumar ರಾಜಕೀಯ ಒಟ್ಟಾಗಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ