ಬೈಕ್ ವ್ಹೀಲಿಂಗ್: ಮತ್ತೆ ಆರು ಮಂದಿ ಬಂಧನ

bike wheeling: police arrested 6 boys

28-08-2018

ಬೆಂಗಳೂರು: ಆಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುವ ಯುವಕರ ವಿರುದ್ಧದ ಕಾರ್ಯಾಚರಣೆ ತೀವ್ರ ಗೊಳಿಸಿರುವ ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 6 ಮಂದಿ ಯುವಕರನ್ನು ಬಂಧಿಸಿದ್ದಾರೆ.

ಬಂಧಿತ ಯುವಕರಿಂದ ವ್ಹೀಲಿಂಗ್ ಮಾಡಿದ ಬೈಕ್ ಗಳನ್ನು ವಶಪಡಿಸಿಕೊಂಡು ಅವರ ಪೋಷಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಆರೋಪಿಗಳು ನೈಸ್ ರಸ್ತೆ ಹಾಗೂ ಮೈಸೂರು ರಸ್ತೆಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾಗ ಬ್ಯಾಟರಾಯನಪುರ ಸಂಚಾರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ವ್ಹೀಲಿಂಗ್ ಮಾಡುವ ಯುವಕರನ್ನು ಬಂಧಿಸಿ ಜಾಗೃತಿ ಮೂಡಿಸುತ್ತಿದ್ದರೂ ಯುವಕರ ವ್ಹೀಲಿಂಗ್ ಕ್ರೇಜ್ ಕಡಿಮೆಯಾಗಿಲ್ಲ. ನೈಸ್‍ ರಸ್ತೆ ಸೇರಿ ಇನ್ನಿತರ ರಸ್ತೆಗಳಲ್ಲಿ ಯುವಕರು ವ್ಹೀಲಿಂಗ್ ಮಾಡುತ್ತಿದ್ದು ಇದರ ಮೇಲೆ ಸಂಚಾರ ಪೊಲೀಸರು ನಿಗಾವಹಿಸಿದ್ದಾರೆ. ಇತ್ತೀಚೆಗೆ ಏರ್ ಪೋರ್ಟ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋ ಮಾಡಿ ಬಳಿಕ ಅದನ್ನು ಸಾಮಾಜಿಕ ಜಾಲತಾಣಕ್ಕೆ ಹಾಕಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದರು


ಸಂಬಂಧಿತ ಟ್ಯಾಗ್ಗಳು

wheeling nice road ವಿಡಿಯೋ ನೋಟಿಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ