ಬದುಕಿದ್ದಾಗಲೇ ವ್ಯಕ್ತಿಗೆ ಮರಣ ಪತ್ರ: ಗ್ರಾಮ ಲೆಕ್ಕಾಧಿಕಾರಿ ಅಮಾನತು

An village accountant suspended for his irresponsible!

29-08-2018

ಮಂಡ್ಯ: ವ್ಯಕ್ತಿಯೊಬ್ಬರಿಗೆ ಬದುಕಿರುವಾಗಲೇ ಮರಣ ಪತ್ರ ನೀಡಿ ಬೇಜವಾಬ್ದಾರಿ ಪ್ರದರ್ಶಿಸಿರುವ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಜಿಲ್ಲಾಧಿಕಾರಿ ಕ್ರಮ ಕೈಗೊಂಡಿದ್ದಾರೆ. ಮರಣ ಪತ್ರ ನೀಡಿ ಕರ್ತವ್ಯ ಲೋಪ ಎಸಗಿದ ಗ್ರಾಮ ಲೆಕ್ಕಾಧಿಕಾರಿಯನ್ನು‌ ಕರ್ತವ್ಯದಿಂದ ಅಮಾನತು ಮಾಡಿ ಮಂಡ್ಯ ಡಿಸಿ ಆದೇಶಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕು ಪೀಹಳ್ಳಿ ವೃತ್ತದ ಲಿಂಗಪ್ಪಾಜಿ ಅಮಾನತಾಗಿರುವ ಗ್ರಾಮ ಲೆಕ್ಕಾಧಿಕಾರಿ. ‌‌‌‌‌‌ಶ್ರೀರಂಗಪಟ್ಟಣದ ಚಿಕ್ಕಹಾರೋಹಳ್ಳಿ ಗ್ರಾಮದ ರಾಮೇಗೌಡ ಎಂಬುವರಿಗೆ ಬದುಕಿದ್ದಾಗಲೇ ಮರಣ ಪತ್ರ ನೀಡಿ ಕರ್ತವ್ಯ ಲೋಪ ಎಸಗಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ