ತನ್ನ ಗಂಡನ ಈ ಚಟದಿಂದ ಹೆಂಡತಿ ಆತ್ಮಹತ್ಯೆ!

illegal relationship of husband: wife committed suicide

29-08-2018

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಕಾಂಬರಿನಗರದಲ್ಲಿ ನಡೆದಿದೆ.

ಶಾಕಾಂಬರಿನಗರದ ದೇವಿಕಾ(32)ಎಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿಯನ್ನು ಗುರುತಿಸಲಾಗಿದೆ. ಬನಶಂಕರಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅವರ ಪತಿ ಸುನೀಲ್ ಕುಮಾರ್ (38)ಕೂಡ ಅದೇ ಶಾಲೆಯಲ್ಲಿ ಶಿಕ್ಷಕರಾಗಿದ್ದರು.

ಜೊತೆಯಲ್ಲಿ ಕೆಲಸ ಮಾಡುವ ವೇಳೆ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಈ ನಡುವೆ ಪತಿ ಬೇರೊಬ್ಬರ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದರು, ಈ ಬಗ್ಗೆ ದೇವಿಕಾ ಪ್ರಶ್ನಿಸುತ್ತಿದ್ದು ಆಗಾಗ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು.

ಜಗಳದಿಂದ ಬೇಸತ್ತ ದೇವಿಕಾ ನಿನ್ನೆ ರಾತ್ರಿ 12ಗಂಟೆ ಸುಮಾರಿಗೆ ತನ್ನ ಸಾವಿಗೆ ಗಂಡನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೆಪಿ ನಗರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Relationship Teacher ಅಕ್ರಮ ಅನೈತಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ