ದಂಡುಪಾಳ್ಯದ ಸರಗಳ್ಳನೊಬ್ಬನ ಬಂಧನ

A chain snatcher from dandupalya arrested by police!

29-08-2018

ಬೆಂಗಳೂರು: ದ್ವಿಚಕ್ರ ವಾಹನ ಕಳವು ಮಾಡಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ದೇವನಹಳ್ಳಿ ಪೊಲೀಸರು 4.75 ಲಕ್ಷ ರೂ. ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಂತಾಮಣಿಯ ದಂಡುಪಾಳ್ಯದ ವೆಂಕಟಸ್ವಾಮಿ (35) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯಿಂದ 9 ದ್ವಿಚಕ್ರ ವಾಹನಗಳು, 2 ಚಿನ್ನದ ಸರಗಳು ಸೇರಿ, 4.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

ಆರೋಪಿಯು ವಾಹನ ನಿಲುಗಡೆ ಪ್ರದೇಶದಲ್ಲಿ ನಿಲ್ಲಿಸಿರುವ ಬೈಕ್‍ಗಳನ್ನು ಕಳವು ಮಾಡಿ ದೇವನಹಳ್ಳಿ ಸುತ್ತಮುತ್ತಲ ಪ್ರದೇಶಗಳಲ್ಲಿ ಸುತ್ತಾಡುತ್ತಾ ಸರಗಳವು ಮಾಡುತ್ತಿದ್ದ. ಆರೋಪಿಯ ಬಂಧನದಿಂದ 10ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.


ಸಂಬಂಧಿತ ಟ್ಯಾಗ್ಗಳು

Dandupalya chain snatch ದ್ವಿಚಕ್ರ ವಾಹನ ಡಿಸಿಪಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ