ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ: ಶಾಸಕ ರಾಘವೇಂದ್ರ ಹಿಟ್ನಾಳ್

Siddaramaiah is next cm: said MLA Raghavendra K.Basavaraj Hitnal

29-08-2018

ಕೊಪ್ಪಳ: ‘ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗುತ್ತಾರೆ’ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಧ್ಯ ಸಿಎಂ ಬದಲಾವಣೆ ಮಾಡೋ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು. ಬದಲಾವಣೆ ಮಾಡೋದು ಬಿಡೋದು ಹೈಕಮಾಂಡ್ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದಿದ್ದಾರೆ. ಸಿದ್ದರಾಮಯ್ಯನವರು ಮುಂದಿನ ಚುನಾವಣೆಯಲ್ಲಿ ಸಿಎಂ ಆಗೋ ಇಂಗಿತ ವ್ಯಕ್ತಪಡಿಸಿದ್ದಾರೆ. ಇದಕ್ಕೆ ನಮ್ಮ ಸಹಮತ ಇದೆ. ಆದರೆ, ಇದೀಗ ಸುಭದ್ರ ಸರ್ಕಾರ ನಡೆಯುತ್ತಿದೆ ಸಮ್ಮಿಶ್ರ ಸರರ್ಕಾರಕ್ಕೆ ಯಾವುದೇ ಅಡೆತಡೆ ಇಲ್ಲ. ಏನೇ ವಿಷಯ ತೀರ್ಮಾನವಾಗಬೇಕಾದರೂ ಅದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ ಶಾಸಕ ರಾಘವೇಂದ್ರ ಹಿಟ್ನಾಳ್. ರಾಘವೇಂದ್ರ ಹಿಟ್ನಾಳ್ ಸಿದ್ದರಾಮಯ್ಯನವರ ಪರಮಾಪ್ತ ಶಾಸಕ.


ಸಂಬಂಧಿತ ಟ್ಯಾಗ್ಗಳು

Raghavendra Hitnal siddaramaiah ಸಹಮತ ಹೈಕಮಾಂಡ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ