ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲೇ ವ್ಯಕ್ತಿ ನೇಣಿಗೆ ಶರಣು

A man hangs himself in a commercial complex building

30-08-2018

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ವಾಣಿಜ್ಯ ಸಂಕೀರ್ಣ ಕಟ್ಟಡದಲ್ಲೇ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಪುರಸಭಾ ಕಾರ್ಯಾಲಯದ ಎಡ ಭಾಗದಲ್ಲಿ ಸಂಕೀರ್ಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂತನೂರು ಗ್ರಾಮದ ಮಹದೇವ ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಮಹದೇವ ಟಿಪ್ಪರ್ ಚಾಲಕನಾಗಿದ್ದ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸ್ಥಳಕ್ಕೆ ಧಾವಿಸಿದ ಗುಂಡ್ಲುಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

commercial complex suicide ಸಂಕೀರ್ಣ ಪುರಸಭಾ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ