ಸಮಾಜವಾದಿ ಪಕ್ಷದಲ್ಲಿ ಬಿರುಕು: ಹೊಸ ಪಕ್ಷ ಕಟ್ಟಿದ ಶಿವಪಾಲ್ ಯಾದವ್

samajwadi leader shivpal yadav formed new party

30-08-2018

ಲಖನೌ: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವ ಬೆನ್ನಲ್ಲೇ  ಸಮಾಜವಾದಿ ಪಕ್ಷದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಶಿವಪಾಲ್ ಯಾದವ್ ಇದೀಗ ಪಕ್ಷ ತೊರೆದಿದ್ದಾರೆ. ತನ್ನನ್ನು ಪಕ್ಷ ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಯಾದವ್ ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಎಸ್.ಪಿ ಮುಖಂಡ ಶಿವಪಾಲ್ ಯಾದವ್ ‘ಸಮಾಜವಾದಿ ಜಾತ್ಯತೀತ ಮೋರ್ಚಾ’ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ. ಸಮಾಜವಾದಿ ಪಕ್ಷ ತನಗೆ ಯಾವುದೇ ಜವಾಬ್ದಾರಿ, ಸಭೆಗಳಿಗೆ ಕರೆಯದೆ ಪಕ್ಷದಲ್ಲಿ ತನ್ನನ್ನು ನಿರ್ಲಕ್ಷಿಸುತ್ತಿದೆ, ಹೀಗಾಗಿ ಹೊಸ ಪಕ್ಷ ಸ್ಥಾಪಿಸಿರುವುದಾಗಿ ಹೇಳಿದ್ದಾರೆ. ಇದೇ ರೀತಿ ಸಮಾಜವಾದಿ ಪಕ್ಷದಲ್ಲಿ ಸರಿಯಾದ ಸ್ಥಾನಮಾನ ಸಿಗದ, ಉತ್ತಮ ರೀತಿಯಲ್ಲಿ ನಡೆಸಿಕೊಳ್ಳದವರು ನನ್ನೊಂದಿಗೆ ಬನ್ನಿ ಎಂದು ಎಸ್.ಪಿ ನಾಯಕರಿಗೆ ಶಿವಪಾಲ್ ಯಾದವ್ ಮನವಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ