ಇದು ದೊಂಬರಾಟದ ಸರ್ಕಾರ: ಕೋಟ ಶ್ರೀನಿವಾಸ್ ಪೂಜಾರಿ

state coalition government completed 100 days: Kota srinivas poojary reaction on it

30-08-2018

ಮಂಗಳೂರು: 'ನೂರು ದಿನಗಳ ಕಾಲ ನೂರು ಸಮಸ್ಯೆಗಳನ್ನು ಸಮ್ಮಿಶ್ರ ಸರ್ಕಾರ ತಂದಿದೆ' ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿರುವ ಹಿನ್ನೆಲೆ ಮಂಗಳೂರಲ್ಲಿ ಮಾತನಾಡಿದ ಅವರು, ‘ನೂರು ದಿನಗಳ ಕಾಲ ನೂರು ಸಮಸ್ಯೆಯನ್ನು ಸರ್ಕಾರ ತಂದಿದೆ, ನೂರು ದಿನದಲ್ಲಿ ಜನರಿಗೆ ಯೋಗ್ಯವಾದ ಕೆಲಸವನ್ನು ಮಾಡಿಲ್ಲ, ನೂರು ದಿನದ ಸರ್ಕಾರ ಅಲ್ಲ, ಇದು ದೊಂಬರಾಟದ ಸರ್ಕಾರ' ಎಂದು ಟೀಕಿಸಿದ್ದಾರೆ. 'ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮತ್ತೆ ಸಿದ್ದರಾಮಯ್ಯ ಹಾವು ಮುಂಗುಸಿ ಹಾಗೆ ನಡೆದು ಕೊಳ್ಳುತ್ತಿದ್ದಾರೆ. ಜನರ ಸಮಸ್ಯೆಯನ್ನು ಪರಿಹಾರ ಮಾಡುವುದನ್ನು ಬಿಟ್ಟು ಆಡಳಿತ ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ' ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ