ರಾಹುಲ್ ಗಾಂಧಿ ಭೇಟಿ ಮಾಡಿದ ಕುಮಾರಸ್ವಾಮಿ

Cm kumaraswamy meet rahul gandhi at new delhi

30-08-2018

ನವದೆಹಲಿ: ದೆಹಲಿಯ ತುಘಲಕ್ ಲೇನ್ ನಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ನಿವಾಸದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭೇಟಿ ಮಾಡಿದರು. ಇಂದಿಗೆ ಅಂದರೆ ಆಗಸ್ಟ್ 30ಕ್ಕೆ ರಾಜ್ಯದ ಮೈತ್ರಿ ಸರ್ಕಾರ 100 ದಿನಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿದರು. ಈ ಸಂದರ್ಭದಲ್ಲಿ ಎಐಸಿಸಿ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ಜನತಾದಳ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಅಲಿ ಉಪಸ್ಥಿತರಿದ್ದರು. ಈ ವೇಳೆ ರಾಹುಲ್ ಗಾಂಧಿಯವರೊಂದಿಗೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

kumaraswamy Rahul Gandhi ತುಘಲಕ್ ಡ್ಯಾನಿಶ್ ಅಲಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ