ಕಿಡಿಕೇಡಿಗಳಿಂದ ಬಾಬು ಜಗಜೀವನರಾಂ ಪ್ರತಿಮೆ ವಿರೂಪ

Babu Jagjivan Ram statue distortion at nanjangud

30-08-2018

ಮೈಸೂರು: ಮಾಜಿ ಉಪ ಪ್ರಧಾನಿ ದಿ.ಬಾಬು ಜಗಜೀವನರಾಂ ಅವರ ಪುತ್ಥಳಿಯನ್ನು ದುಷ್ಕರ್ಮಿಗಳು ವಿರೂಪ ಗೊಳಿಸಿದ್ದಾರೆ. ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹುಳಿಮಾವು ಗ್ರಾಮದಲ್ಲಿ ಎರಡು ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಪುತ್ಥಳಿಯ ಕುತ್ತಿಗೆ ಭಾಗದಲ್ಲಿ ವಿರೂಪಗೊಳಿಸಿ ಪ್ರತಿಮೆಯ ತಲೆಭಾಗ ಹಿಂದಕ್ಕೆ ವಾಲುವಂತೆ ಮಾಡಿ ಕಿಡಿಗೇಡಿತನ ಪ್ರದರ್ಶಿಸಿದ್ದಾರೆ.

ನಿನ್ನೆ ತಡರಾತ್ರಿ ಘಟನೆ ನಡೆದಿದೆ ಎನ್ನಲಾಗಿದ್ದು, ಹುಳಿಮಾವು ಗ್ರಾಮದಲ್ಲಿ ದಲಿತ ಸಂಘಟನೆಗಳು ಘಟನೆ ಖಂಡಿಸಿ ಭಾರೀ ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿ, ಗ್ರಾಮಸ್ಥರ ಮನವೊಲಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೋಳ್ಳೊದಾಗಿ ಭರಸೆ ನೀಡಿದ್ದಾರೆ ಪೊಲೀಸರು. ಆದರೂ, ಗ್ರಾಮದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು ಪೊಲೀಸರು ಒಂದು ಕಣ್ಣಿಟ್ಟಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ