ಫೇಸ್ ಬುಕ್: ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜಟಾಪಟಿ

Talk war of tumkur bjp-jds worker in facebook!

30-08-2018

ತುಮಕೂರು: ಜಿಲ್ಲೆಯ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಜಟಾಪಟಿ ಇನ್ನೂ ಮುಗಿದಿಲ್ಲ, ಬದಲಾಗಿ ತಾರಕಕ್ಕೇರುತ್ತಿದೆ. ಈ ಹಿಂದೆ ಜೆಡಿಎಸ್ ಶಾಸಕ ಗೌರಿಶಂಕರ್ ಹಾಗು ಬಿಜೆಪಿಯ ಮಾಜಿ ಶಾಸಕ ಸುರೇಶ್ ಗೌಡ ನಡುವೆ ವಾಕ್ಸಮರವೇ ಆಗಿತ್ತು. ಇದೀಗ ಕಾರ್ಯಕರ್ತರ ಮನಸಿಗೆ ಬೆಂಕಿ ಹಚ್ಚಿದ ಉಭಯ ನಾಯಕರು. ನಾಯಕರ ಟಾಕ್ ವಾರ್ ಬಳಿಕ ಇದೀಗ ಬೆಂಬಲಿಗರ ಸರದಿ ಎಂಬಂತೆ, ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಸ್ಪರ ಬೈದಾಡಿಕೊಳ್ಳುತ್ತಿದ್ದಾರೆ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು.

ಇದು ಎಷ್ಟರ ಮಟ್ಟಿಗೆ ಹೋಗಿತ್ತೆಂದರೆ ‘ಸುರೇಶ್ ಗೌಡನನ್ನು ಸಾಯಿಸಿ ಬಿಡೋಣ’ ಎಂದು ಜೆಡಿಎಸ್ ಕಾರ್ಯಕರ್ತ ಪ್ರವೀಣ್ ಸೌಮ್ಯ ಕಮೆಂಟ್ ಮಾಡಿದ್ದಾರೆ. ಈ ಕುರಿತು ಜೆಡಿಎಸ್ ಕಾರ್ಯಕರ್ತ ಪ್ರವೀಣ್ ಸೌಮ್ಯ ವಿರುದ್ಧ ಎಸ್ಪಿಗೆ ದೂರು ನೀಡಲು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿಯ ಜಿಲ್ಲಾ ಪಂಚಾಯತಿ. ತಾಲ್ಲೂಕು ಪಂಚಾಯತಿ ಸದಸ್ಯರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ