ಸರ್ಕಾರಿ ಕಚೇರಿ ಮುಂದೆಯೇ ಇಬ್ಬರು ಆತ್ಮಹತ್ಯೆಗೆ ಯತ್ನ

two villagers attempted to suicide in front of sub registrar

30-08-2018

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊಸಹೊಳಲು ಗ್ರಾಮದ ದೇವಾಲಯಕ್ಕೆ ಸೇರಿದ ಜಮೀನಿನ ಮೇಲೆ ಕಣ್ಣಿಟ್ಟಿರುವ ಕೆಲ ಸ್ಥಳೀಯ ಪ್ರಭಾವಿಗಳು, ಕಡಿಮೆ ದರಕ್ಕೆ ಅಕ್ರಮವಾಗಿ ಜಮೀನಿನ ನೋಂದಣಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಹೊಸಹೊಳಲು ಗ್ರಾಮಸ್ಥರು ಕೆ.ಆರ್.ಪೇಟೆ ಉಪ ನೋಂದಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಇಬ್ಬರು ಗ್ರಾಮಸ್ಥರು ಸೀಮೆಎಣ್ಣೆ ಸುರಿದು‌ಕೊಂಡು ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಸಧ್ಯ ಸ್ಥಳದಲ್ಲಿ ಪೊಲೀಸರು ಇದ್ದುದರಿಂದ ಆತ್ಮಹತ್ಯಾ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಪ್ರತಿಭಟನೆಯಿಂದ ಅಕ್ರಮ ನೋಂದಣಿಗೆ ಅಧಿಕಾರಿಗಳು ತಡೆ ಹಿಡಿದಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Registration Temple ಭದ್ರತೆ ಅಕ್ರಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ