ಮತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ ನಟ ದರ್ಶನ್ ಪತ್ನಿ

actor darshna wife lodge a complaint in cyber crime police

30-08-2018

ಬೆಂಗಳೂರು: ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆದು ನನ್ನ ಫೋಟೋಗಳನ್ನು ಹಾಕಿ ಅಸಂಬದ್ಧ ಅಶ್ಲೀಲ ಪದಗಳ ಪೋಸ್ಟ್ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ನನ್ನ ಪೋಟೋ ಹಾಕಿ ಅಸಂಬದ್ಧ ಹಾಗೂ ಅಶ್ಲೀಲ ಪದಗಳ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ತಮ್ಮ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೈಬರ್ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಶೋಧ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Darshan cyber crime ಪೋಸ್ಟ್ ಫೇಸ್ ಬುಕ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ