ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಸಮಾಧಾನ!

Ayanur Manjunath dissatisfied about election officers in polling booth!

31-08-2018

ಶಿವಮೊಗ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ಇಂದು ಮತನಾನ ನಡೆಯುತ್ತಿದ್ದು, ಶಿವಮೊಗ್ಗದ ಕಾಮಾಕ್ಷಿ ನಿಧಿ ಶಾಲೆ ಬೂತ್ ನಲ್ಲಿ ಚುನಾವಣಾ ಅಧಿಕಾರಿಗಳ ವಿರುದ್ಧ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಬೂತ್ ಏಜೆಂಟರಿಗೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಚುನಾವಣಾ ಗೊಂದಲಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅವರು, ಚುನಾವಣಾಧಿಕಾರಿಗಳಿಗೆ ಸರಿಯಾದ ಮಾಹಿತಿ ಇದ್ದಂತಿಲ್ಲ, ಬೂತ್ ಏಜೆಂಟರಿಗೆ ಮತ ಹಾಕಲು ಬಂದವರ ಮಾಹಿತಿ ತಿಳಿಯುವ ಹಕ್ಕಿದೆ. ಬೂತ್ ಏಜೆಂಟರಿಗೇ ಮಾಹಿತಿ ಸಿಕ್ಕಿಲ್ಲ ಅಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಶಿವಮೊಗ್ಗ ಪಾಲಿಕೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿಲಿದೆ ಎಂದು ಆಯನೂರು ಮಂಜುನಾಥ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

election Shimoga ಬೂತ್ ಶಾಲೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ