ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ: ಆರ್.ಅಶೋಕ್ ಪ್ರತಿಕ್ರಿಯೆ

Result of local bodies election: R. Ashok

03-09-2018

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹಿನ್ನೆಲೆ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಈ ಸರ್ಕಾರಕ್ಕೆ ಜನ ಬೆಂಬಲ ಇಲ್ಲ ಅನ್ನೋದು ಮತ್ತೆ ಸಾಬೀತಾಗಿದೆ. ಮೈತ್ರಿ ಸರ್ಕಾರಕ್ಕೆ ಕೌಂಟ್ ಡೌನ್ ಆರಂಭವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸರ್ಕಾರಕ್ಕೆ ಬೆಂಬಲ ಸಿಗುತ್ತದೆ ಎಂದು ಹೇಳುತ್ತಿದ್ದರು. ಆದರೆ, ಜೆಡಿಎಸ್ ಹೀನಾಯ ಸ್ಥಿತಿ ತಲುಪಿದೆ. ಕಾಂಗ್ರೆಸ್ ಕೂಡ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಬಿಜೆಪಿಗೆ ಗೆಲುವು ಡಬ್ಬಲ್ ಆಗಿದೆ’ ಎಂದರು.

‘ಆಡಳಿತ ಪಕ್ಷಗಳಿಗೆ ಬೆಂಬಲ ಕೊಡೋದು ಸಾಮಾನ್ಯ, ಆದರೆ ಇಲ್ಲಿ ವ್ಯತಿರಿಕ್ತ ಫಲಿತಾಂಶ ಬಂದಿದೆ. ಹಾಸನದಲ್ಲಿ ಜೆಡಿಎಸ್ ಕಡಿಮೆ ಸ್ಥಾನಗಳಿಸಿದೆ. ಅತಂತ್ರ ಇರುವ ಕಡೆ ಮೈತ್ರಿ ವಿಚಾರವಾಗಿ ಸ್ಥಳೀಯ ಮಟ್ಟದಲ್ಲೇ ತೀರ್ಮಾನ ಆಗುತ್ತದೆ. ಯಾವ ಪಕ್ಷದ ಜೊತೆಗೆ ಮೈತ್ರಿ ಆಗಬೇಕು ಅನ್ನೋದನ್ನ ಸ್ಥಳೀಯ ನಾಯಕರಿಗೆ ಬಿಡುತ್ತೇವೆ. ಈ ಬಗ್ಗೆ ರಾಜ್ಯ ಮಟ್ಟದ ನಾಯಕರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.


ಸಂಬಂಧಿತ ಟ್ಯಾಗ್ಗಳು

local elections Karnataka ತೀರ್ಮಾನ ಆರ್.ಅಶೋಕ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ