ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋಲಿಸಿದರಾ ಸಿದ್ದರಾಮಯ್ಯ!?

karnataka local body election: BJP won shimogga mahanagara palike

03-09-2018

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಳ್ಳೆಯ ಫಲಿತಾಂಶವನ್ನು ಪಡೆದಿದ್ದರೂ, ಅನೇಕ ಕಡೆ ಹೀನಾಯ ಸೋಲನ್ನು ಅನುಭವಿಸಿದೆ. ಸ್ವಲ್ಪ ವಿವೇಚನೆಯಿಂದ ಚುನಾವಣೆ ನಿಭಾಯಿಸಿದ್ದರೆ ಇದಕ್ಕಿಂತಲೂ ಉತ್ತಮವಾದ ಫಲಿತಾಂಶವನ್ನು ಕಾಂಗ್ರೆಸ್ ಪಕ್ಷ ಅನಾಯಾಸವಾಗಿ ಪಡೆಯಬಹುದಿತ್ತು ಎಂದು ಹೇಳಲಾಗುತ್ತಿದೆ. ಶಿವಮೊಗ್ಗದಲ್ಲಿ ಕಳೆದ ಬಾರಿ ಆಡಳಿತ ನಡೆಸಿದ ಕಾಂಗ್ರೆಸ್ ಈ ಬಾರಿ ಬರೀ 7 ಸ್ಥಾನಗಳನ್ನು ಪಡೆದುಕೊಳ್ಳಲು ಕಾಂಗ್ರೆಸ್ ಪಕ್ಷದ ಕೆಲವು ನಾಯಕರುಗಳ ದುರಹಂಕಾರ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಕಡೆಗಣಿಸುವಿಕೆಯೇ ಕಾರಣ ಎಂದು ಹೇಳಲಾಗುತ್ತಿದೆ. ಅದರಲ್ಲೂ ಗೆಲ್ಲುವಂತಹ ಪಕ್ಷದ ಮೂಲ ಕಾರ್ಯಕರ್ತರಿಗೆ ಟಿಕೆಟ್ ನೀಡದೇ ವಲಸೆ ಹಕ್ಕಿಗಳಿಗೆ ಟಿಕೆಟ್ ನೀಡಿರುವುದು ಪಕ್ಷ ಸೋಲುವಲ್ಲಿ ಪ್ರಮುಖ ಪಾತ್ರವಹಿಸಿದೆ ಎನ್ನಲಾಗಿದೆ. ಶಿವಮೊಗ್ಗದ ಸ್ಥಳೀಯ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ಹಸ್ತಕ್ಷೇಪ, ಉಸ್ತುವಾರಿ ನಾಯಕನ ನಿರಾಸಕ್ತಿ ಇವೆಲ್ಲ ಕಾರ್ಯಕರ್ತರು ಉತ್ಸಾಹ ಕಳೆದುಕೊಳ್ಳುವಂತೆ ಮಾಡಿತ್ತು ಮತ್ತು ಆ ಕಾರಣದಿಂದ ಬಿಜೆಪಿ ಸುಲಭವಾಗಿ ಗೆಲ್ಲುವಂತಾಯಿತು ಎಂದು ಕಾಂಗ್ರೆಸ್ ಕಾರ್ಯಕರ್ತರು ತಮ್ಮ ದುಃಖವನ್ನು ತೋಡಿಕೊಳ್ಳುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

siddaramaiah palike ಕಾರ್ಯಕರ್ತ ಉತ್ಸಾಹ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ