ದೆಹಲಿಗೆ ತೆರಳಲಿದ್ದಾರೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

KPCC president Dinesh Gundurao will go to Delhi for pcc meeting

05-09-2018

ಬೆಂಗಳೂರು: 2019ರ ಲೋಕಸಭಾ ಚುನಾವಣೆ ಹಿನ್ನೆಲೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಬೆಳಗಾವಿ ವಿಭಾಗದ ಕೈ ನಾಯಕರ ಸಭೆ ನಡೆಸಿದ್ದಾರೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರದ  ಕಾಂಗ್ರೆಸ್ ಮುಖಂಡರ ಸಭೆ ಸೇರಿದ್ದಾರೆ. ಸಭೆಯಲ್ಲಿ ಈ ಭಾಗದ ಶಾಸಕರು, ಎಂ.ಎಲ್.ಸಿಗಳು, ಪದಾಧಿಕಾರಿಗಳೂ ಭಾಗಿಯಾಗಿದ್ದಾರೆ. ಸಭೆಯ ಬಳಿಕ ದಿನೇಶ್ ಗುಂಡೂರಾವ್ ದೆಹಲಿಗೆ ತೆರಳಲಿದ್ದಾರೆ. ನಾಳೆ ದೆಹಲಿಯಲ್ಲಿ ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ನೇತೃತ್ವದಲ್ಲಿ ಎಲ್ಲಾ ರಾಜ್ಯಗಳ ಪಿಸಿಸಿ(ಪ್ರದೇಶ್ ಕಾಂಗ್ರೆಸ್ ಕಮಿಟಿ) ಅಧ್ಯಕ್ಷರ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಲಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್, ಕೆಪಿಸಿಸಿ ಖಜಾಂಚಿ ಕೃಷ್ಣಂರಾಜು. ಫಂಡ್ ರೈಸಿಂಗ್ ಕುರಿತಂತೆ ನಾಳಿನ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

KPCC Dinesh gundu rao ನೇತೃತ್ವ ಪದಾಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ