ಸ್ಥಳೀಯ ಸಂಸ್ಥೆ-ಅತಂತ್ರ ಫಲಿತಾಂಶ ಇರುವಲ್ಲಿ ಮೈತ್ರಿ: ಸಾ.ರಾ.ಮಹೇಶ್

#Local body election #Sa Ra Mahesh

05-09-2018

ಮೈಸೂರು: ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಬಳಿಕ ಅತಂತ್ರ ಸ್ಥಿತಿಯಲ್ಲಿರುವ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಏರಲು ಮುಂದಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಮೈಸೂರಿನಲ್ಲಿಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಸಹ ಅತಂತ್ರವಾಗಿದ್ದು, ಮೈಸೂರು ಮೇಯರ್ ಗದ್ದುಗೆ ಜೆಡಿಎಸ್ ಪಕ್ಷಕ್ಕೆ ಸಿಗಲಿದ್ದು, 5 ವರ್ಷಗಳ ಕಾಲ ಮೇಯರ್ ಸ್ಥಾನವನ್ನು ಪಕ್ಷದ ಅಭ್ಯರ್ಥಿ ಅಲಂಕರಿಸಲಿದ್ದಾರೆ ಎಂದರು.ಬೆಂಗಳೂರಿನ ಮೇಯರ್ ಸ್ಥಾನವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದು, ಅದರಂತೆ ಮೈಸೂರು ಮೇಯರ್ ಸ್ಥಾನವನ್ನು ಜೆಡಿಎಸ್ ಪಕ್ಷಕ್ಕೆ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಪಕ್ಷದ ವರಿಷ್ಠರು ಈ ಬಗ್ಗೆ ಸದ್ಯದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Sa Ra Mahesh congress-Jds ಮೇಯರ್ ವರಿಷ್ಠರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ