ಬೆಳಗಾವಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಖಂಡ್ರೆ

# PLD bank # Eshwara Khandre # Satish Jarkiholi

07-09-2018

ಬೆಳಗಾವಿ: ರಾಜಕೀಯ ಮೇಲಾಟಕ್ಕೆ ಕಾರಣವಾಗಿದ್ದ ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಮಹಾದೇವ ಪಾಟೀಲ, ಉಪಾಧ್ಯಕ್ಷರಾಗಿ ಬಾಪುಸಾಬ ಜಾಮಾದಾರ ಅವಿರೋಧವಾಗಿ ಆಯ್ಕೆಯಾಗಿದ್ದು, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಣ ಮೇಲುಗೈ ಸಾಧಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್. ಈ ವೇಳೆ ಮಾತನಾಡಿದ ಈಶ್ವರ ಖಂಡ್ರೆ ಸಚಿವ ರಮೇಶ ಜಾರಕಿಹೊಳಿ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಜೊತೆ ಮಾತನಾಡಿ ಅತ್ಯಂತ ಸೌಹಾರ್ದತೆಯಿಂದ ಈ ವಿಷಯವನ್ನು ಬಗೆ ಹರಿಸಲಾಗಿದೆ. ಇದರಲ್ಲಿ ಅವಿರೋಧವಾಗಿ ಅಧ್ಯಕ್ಷರಾಗಿ ಮಹಾದೇವ ಪಾಟೀಲ, ಉಪಾಧ್ಯಕ್ಷರಾಗಿ ಬಾಪುಸಾಬ ಜಮಾದಾರ ಆಯ್ಕೆಯಾಗಿದ್ದಾರೆ. ಈ ಆಯ್ಕೆಗೆ ಎಲ್ಲರ ಸಹಮತವಿದೆ. ಹೀಗಾಗಿ ವರಿಷ್ಠರ ಸೂಚನೆ ಮೇರೆಗೆ ಈ ಆಯ್ಕೆ ನಡೆದಿದೆ ಎಂದರು.

ಬೆಳಗಾವಿ ಕಾಂಗ್ರೆಸ್ ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಇದರಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಹಾಗೂ ಸಮಸ್ಯೆ ಇಲ್ಲ. ಪಿ.ಎಲ್.ಡಿ ಬ್ಯಾಂಕ್ ಚುನಾವಣೆ ಸಣ್ಣ ಚುನಾವಣೆ, ಸೌಹಾರ್ದತೆಯಿಂದ ಬಗೆ ಹರಿಸಲಾಗಿದೆ ಎಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ