ಉಪಹಾರ ಕೂಟದಲ್ಲಿ ಡಿಸಿಎಂ ಪರಂ ಅಸಮಾಧಾನ!

# parameshwar # Lakshmi Hebbalkar

07-09-2018

ಬೆಂಗಳೂರು: ಸಚಿವರುಗಳಿಗೆ ಏರ್ಪಡಿಸಲಾದ ಉಪಹಾರ ಕೂಟ ಸಭೆಯಲ್ಲಿ ಡಿಸಿಎಂ ಜಿ.ಪರಮೇಶ್ವರ್ ಅವರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.

ಈಗಷ್ಟೇ ಸರ್ಕಾರ ನೂರು ದಿನ ಮುಗಿಸಿದ್ದು, ಈಗ ಬೆಳಗಾವಿಯಲ್ಲಿ ಕಿತ್ತಾಟ ನಡೆಸಿರುವುದು ಸರಿಯಲ್ಲ. ಲಕ್ಷ್ಮೀ ಹೆಬ್ಬಾಳ್ಕರ್ ಹಠಕ್ಕೆ ಬಿದ್ದವರಂತೆ ವರ್ತಿಸುತ್ತಿದ್ದಾರೆ ಎಂದು ಸಭೆಯ ವೇಳೆ ಡಿಸಿಎಂ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಣ್ಣ ವಿಷಯವನ್ನು ತಮ್ಮ ಪ್ರತಿಷ್ಠೆ ಕಾರಣಕ್ಕೆ ದೊಡ್ಡದು ಮಾಡಿಕೊಂಡಿದ್ದಾರೆ. ಹೈಕಮಾಂಡ್ ವರೆಗೂ ಈ ವಿಷಯ ತಲುಪಿದೆ. ಇಷ್ಟು ದೊಡ್ಡದು ಮಾಡಿಕೊಂಡಿರುವುದು ಯಾಕೆ?. ಎಂದು ನೇರವಾಗಿಯೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಂದರ್ಭ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಮಾಧ್ಯಮಗಳ ಮುಂದೆ ರಮೇಶ್ ಜಾರಕಿಹೊಳಿ ನನ್ನ ಹೆಸರು ಪ್ರಸ್ತಾಪಿಸಿದ್ದಾರೆ. ನಾನು ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನಿಗೆ ನಿಂತಿದ್ದೇನೆ ಎಂಬುದು ಸರಿಯಲ್ಲ. ನಾನು ಯಾರ ಪರವಾಗಿಯೂ ಇಲ್ಲ. ಪಕ್ಷದ ಪರವಾಗಿಯಷ್ಟೇ ಕೆಲಸ ಮಾಡಿಕೊಂಡು ಬಂದಿದ್ದೇನೆ. ನನ್ನ ಹೆಸರು ಪ್ರಸ್ತಾಪಿಸಿದ್ದು ನೋವು ತಂದಿದೆ ಎಂದು ವಿವರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

G.Parameshwar meeting ಪ್ರಸ್ತಾಪ ಕಾರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ