ಬಿಜೆಪಿ ಸರ್ಕಾರ ಏನ್ ಮಾಡ್ತಿದೆ: ಸೌಮ್ಯ ರೆಡ್ಡಿ

protest against petrol and diesel rates hike

10-09-2018

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ ನೇತೃತ್ವದಲ್ಲಿ ಭಾರತ್ ಬಂದ್ ನಡೆಯುತ್ತಿದ್ದು, ಜಯನಗರದ ಶಾಸಕಿ ಸೌಮ್ಯ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೂಡಲೇ ಪೆಟ್ರೋಲ್ ದರ ಇಳಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದು, ಜನ ವಿರೋಧಿ ಸರ್ಕಾರ, ನೀತಿಗೆಟ್ಟ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆಗಳನ್ನು ಹಾಕಿದ್ದಾರೆ.

ಈ ವೇಳೆ ಮಾತನಾಡಿದ ಶಾಸಕಿ ಸೌಮ್ಯ ರೆಡ್ಡಿ  ಬಿಜೆಪಿ ಸರ್ಕಾರ ಏನ್ ಮಾಡ್ತಿದೆ ಅನ್ನೋದನ್ನ ನಾನು ಪ್ರಶ್ನೆ ಮಾಡ್ತೀನಿ’ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪೆಟ್ರೋಲ್ ದರ ಏರಿಕೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದೆ. ಜನರ ಹಿತದೃಷ್ಟಿಯಲ್ಲಿ ಬಿಜೆಪಿ ಸರ್ಕಾರ ಯಾವುದೇ ಕೆಲಸ ಮಾಡಿಲ್ಲ, ಜನಪರ ಕೆಲಸ ಮಾಡಿ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ. ನಾನು ಜನರ ಪರ ಹಾಗಾಗಿ ಜನರಿಗೆ ಪ್ರಯೋಜನವಾಗುವ ಕೆಲಸವನ್ನ ಮಾಡ್ತೀನಿ, ದಯಮಾಡಿ ಪೆಟ್ರೋಲ್ ದರ ಇಳಿಸಿ ಜನರಿಗೆ ಅನುಕೂಲವಾಗುವಂತೆ ಮಾಡಿ ಎಂದು ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bharat bandh petrol ಸೌಮ್ಯ ರೆಡ್ಡಿ ಘೋಷಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ