ಬೆಲೆ ಏರಿಕೆ ಕಾಂಗ್ರೆಸ್ ನ ಪಾಪದ ಕೂಸು: ಬಿ.ವೈ.ವಿಜಯೇಂದ್ರ

#B.Y.vijayendra #Petrol #Disel

10-09-2018

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಭಾರತ್ ಬಂದ್ ಮಾಡಿ ಪ್ರತಿಭಟಿಸುತ್ತಿರುವ ಕಾಂಗ್ರೆಸ್ ವಿರುದ್ಧ ಬಿ.ವೈ.ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾಧ್ಯನದವರೊಂದಿಗೆ ಮಾತನಾಡಿದ ವಿಜಯೇಂದ್ರ ಪೆಟ್ರೋಲ್, ಡೀಸೆಲ್ ದರ ಹೆಚ್ಚಾಗಿರುವುದರಿಂದ ಜನ ತತ್ತರಿಸಿ ಹೋಗಿದ್ದಾರೆ, ಇದು ಪ್ರಧಾನಿ ಮೋದಿಗೂ ಸಂತಸದ ವಿಷಯ ಅಲ್ಲ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗುತ್ತಿದೆ, ಹೀಗಾಗಿ ತೈಲ ಬೆಲೆ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ ಎಂದು ಬಿಂಬಿಸಲಾಗುತ್ತಿದೆ ಇದು ಸರಿಯಲ್ಲ. ಲೋಕಸಭೆ ಚುನಾವಣೆ ಗುರಿಯಾಗಿಸಿಕೊಂಡು ಈ ರೀತಿ ಕೆಲಸ ಮಾಡುತ್ತಿದೆ. ಬೆಲೆ ಏರಿಕೆ ಆಗಿರೋದು ಕಾಂಗ್ರೆಸ್ ನ ಪಾಪದ ಕೂಸು, ಅವರು ಸರಿಯಾಗಿ ಆರ್ಥಿಕ ವ್ಯವಸ್ಥೆ ಇಟ್ಟುಕೊಂಡು ಬಂದಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎಂದು ಟೀಕೆ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Petrol hike ಪ್ರಧಾನಿ ಮೋದಿ ಸಂತಸ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ