ಬಟ್ಟೆ ಅಂಗಡಿಗೆ ಕನ್ನ ಹಾಕಿದ ಖದೀಮರು !

Kannada News

02-06-2017

ಮೈಸೂರು: ಬಟ್ಟೆ ಅಂಗಡಿಗೆ ಕನ್ನ ಹಾಕಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ದೋಚಿಕೊಂಡು ಪರಾರಿಯಾಗಿರುವ ಘಟನೆ ಮೈಸೂರಿನ ಕೆ.ಜಿ ಕೊಪ್ಪಲಿನಲ್ಲಿ ನಡೆದಿದೆ. ಕಳೆದ ರಾತ್ರಿ ಅಂಗಡಿ ಬಂದ್ ಮಾಡಿ ತೆರಳಿದ್ದ ಮಾಲೀಕ ಇಂದು ಬೆಳಿಗ್ಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳತನದ ಬಗ್ಗೆ ಅಂಗಡಿ ಮಾಲೀಕ ದೂರು ದಾಖಲಿಸಿದರು. ನಂತರ ಸರಸ್ವತಿಪುರಂ ಠಾಣೆ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ