ಪೊಲೀಸ್ ಠಾಣೆ ಮುಂದೆ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಸಾವು!

# Suspected death # Police station # Doddaballapura

11-09-2018

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ  ಕೂಗೋನಹಳ್ಳಿ ಗ್ರಾಮದ ಚನ್ನಕೇಶವ (60) ಎಂದು ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ತಾಲ್ಲೂಕಿನ ಪೊಲೀಸ್ ಠಾಣೆಯ ಮುಂಭಾಗದಲ್ಲೇ ವ್ಯಕ್ತಿಯು ಸಾವನ್ನಪ್ಪಿದ್ದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿವೆ. ಮೃತ ದೇಹದ ಪಾದ ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ರಸ್ತೆ ಅಪಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

Police Station suspect ಮೃತ ದೇಹ ಅನುಮಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ