ಹೆಚ್.ಡಿ.ದೇವೇಗೌಡರ 'ನಮ್ಮೂರ ದ್ಯಾವಪ್ಪ' 

#H.D.Deve Gowda # Book #H.vishwanath

11-09-2018

ಹಾಸನ: ಜಿಲ್ಲೆಯ ಹೊಳೆನರಸೀಪುರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವನ ಚರಿತ್ರೆ ಆಧಾರಿತ ಪುಸ್ತಕ 'ನಮ್ಮೂರ ದ್ಯಾವಪ್ಪ' ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಪಾಲ್ಗೊಂಡಿದ್ದರು. ಉಪನ್ಯಾಸಕ ಹಾಗೂ ಲೇಖಕ ಫೈಯಜ್ ಫಾಷ ಬರೆದಿರುವ ಪುಸ್ತಕದಲ್ಲಿ ಹರದನಹಳ್ಳಿಯಿಂದ ದಿಲ್ಲಿಯವರೆಗೆ ಹೆಚ್.ಡಿ.ದೇವೇಗೌಡರ ಹಾದಿಯನ್ನು ಅನಾವರಣ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Ex-prime minister H.D.Deve Gowda ಲೇಖಕ ಹರದನಹಳ್ಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ