ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ

#Mandya # Award  #MGNREGA

11-09-2018

ಬೆಂಗಳೂರು: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು  ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವುದಕ್ಕಾಗಿ ರಾಜ್ಯದ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟೀಯ ಪ್ರಶಸ್ತಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಂದ ಮಂಡ್ಯ ಜಿಲ್ಲೆಯ ನಿಕಟಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್.ಬಿ, ಉಪ ಕಾರ್ಯದರ್ಶಿ ಕೃಷ್ಣರಾಜು ಹಾಗೂ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕಿ ಶಾಂತ ಎಂ, ಅವರು ಪ್ರಶಸ್ತಿ ಸ್ವೀಕರಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ