ಮೂವರು ಮಕ್ಕಳ ಮೇಲೆ ಬೀದಿ ನಾಯಿಗಳು ಅಟ್ಯಾಕ್

12-09-2018
ಬೆಂಗಳೂರು: ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರೆದಿದೆ. ಬೆಂಗಳೂರಿನಲ್ಲಿ ಬೀದಿ ನಾಯಿಗಳ ರಾಕ್ಷಸ ವರ್ತನೆಗೆ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಮೊನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ ಮೊನ್ನೆ ಮೂವರು ಮಕ್ಕಳ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿವೆ. 7 ಮತ್ತು 9 ವರ್ಷದ ಬಾಲಕಿಯರಿಬ್ಬರು ಸೇರಿದಂತೆ 9 ವರ್ಷದ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ದಾಳಿಯಿಂದ ಬಾಲಕನಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಟವಾಡುತ್ತಾ ಮನೆಗೆ ಹೊರಟಿದ್ದ ವೇಳೆ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.
ಒಂದು ಕಮೆಂಟನ್ನು ಹಾಕಿ